
ನಮ್ಮ ದಾವಣಗೆರೆ ಏ.17: ಪ್ರಸಕ್ತ ಸಾಲಿನ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
Join Whatsapp Group NammaDavangere 04
Join Whatsapp Group NammaDavangere 05
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. 45 ವರ್ಷ ವಯೋಮಾನದೊಳಗಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 22 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ದೂ.ಸಂ:08192-230123 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಕಾವ್ಯ ತಿಳಿಸಿದ್ದಾರೆ.
