ನಮ್ಮ ದಾವಣಗೆರೆ ಜೂನ್.22: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಟೆನ್ಜಿಂಗ್ ನಾರ್ಜೆ ರಾಷ್ಟ್ರೀಯ ಸಾಹಸ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.
Join Whatsapp Group NammaDavangere 04
Join Whatsapp Group NammaDavangere 05
ಕಳೆದ 2022, 2023 ಹಾಗೂ 2024ನೇ ಸಾಲಿನಲ್ಲಿ ಜಲಸಾಹಸ, ವಾಯು ಸಾಹಸ ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು https://awards.gov.in/ ನಲ್ಲಿ ಸಲ್ಲಿಸಬಹುದಾಗಿದೆ. ಆನ್ಲೈನ್ ಅರ್ಜಿ ನಮೂನೆಯಲ್ಲಿ ಯಾವುದೇ ಸಮಸ್ಯೆ ಎದುರಾದಲ್ಲಿ ಸಹಾಯಕ್ಕಾಗಿ ಟೋಲ್ ಫ್ರೀ ನಂ. 01123386898 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




