
ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಿಂದ ಎರಡು ಹೆಸರುಗಳನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಶಿಫಾರಸ್ಸು ಮಾಡಬೇಕಾಗಿದ್ದು, ಅದರಂತೆ ಜಿಲ್ಲಾ ಮಟ್ಟದಲ್ಲಿ 10 ಅಧಿಕಾರಿ, ನೌಕರರಿಗೆ ಈ ಪ್ರಶಸ್ತಿಯನ್ನು ಪಡೆಯಲು ಅವಕಾಶವಿದೆ. ಸರ್ವೋತ್ತಮ ಸೇವಾ ಪ್ರಶಸ್ತಿಯ 2 ಹಂತದ ಪ್ರಶಸ್ತಿಗಳಿಗೂ ಅರ್ಜಿ ಸಲ್ಲಿಸಬಹುದು. ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ತಮ್ಮ ನಾಮನಿರ್ದೇಶನಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 14 ಕೊನೆಯ ದಿನವಾಗಿರುತ್ತದೆ. ವೆಬ್ ಸೈಟ್ http://sarvothamaawards.karnataka.gov.in ಅಥವಾ http://dparar.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.
