
ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಹಾಗೂ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ವಿರುದ್ದ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾರಣರಾಗಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕುಶಾಲನಗರದ ಸರ್ಕಾರಿ ಆಸ್ಪತ್ರೆ ಮುಂಭಾಗ
ಬಿಜೆಪಿ ಪ್ರತಿಭಟನೆ ನಡೆಸಿತು.

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರ, ಪ್ರತಾಪ್ ಸಿಂಹ, ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಶ್ರೀ ಶ್ರೀವತ್ಸ, ಬಿಜೆಪಿ ಪದಾಧಿಕಾರಿಗಳು, ಮಾಜಿ ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
