
ಮಂಗಳೂರಿನಲ್ಲಿ 12 ವರ್ಷದ ಬಾಲಕನ ಎದೆಯಲ್ಲಿ ಹೊಕ್ಕಿದ್ದ ತೆಂಗಿನ ಗರಿ ಹಾಗೂ ಸರವನ್ನು ಸುದೀರ್ಘ ಅವಧಿಯ ಶಸ್ತ್ರಚಿಕಿತ್ಸೆಯ ಮೂಲಕ ಹೊರ ತೆಗೆಯಲಾಗಿದೆ. ಇಂತಹ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಡಾ. ಸುರೇಶ್ ಪೈ ನೇತೃತ್ವದ ತಂಡದ ಕಾರ್ಯ ಶ್ಲಾಘನೀಯ.
Join Whatsapp Group NammaDavangere 04
Join Whatsapp Group NammaDavangere 05
ಮಡಿಕೇರಿಯಲ್ಲಿ ಇರುವ ಅಸ್ಸಾಂ ಮೂಲದ ಬಾಲಕ ಆಟವಾಡುತ್ತಿದ್ದಾಗ ತೆಂಗಿನ ಗರಿಯ ಭಾಗವೊಂದು ಮೇಲೆ ಬಿದ್ದಿತು. ಬಾಲಕನ ಕುತ್ತಿಗೆಯಲ್ಲಿದ್ದ ಸರದ ಜೊತೆಗೆ ತೆಂಗಿನ ಗರಿಯೂ ಎದೆಯ ಭಾಗದಲ್ಲಿ ಸಿಲುಕಿಕೊಂಡಿತ್ತು. ಸುಮಾರು ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡ ಗರಿ ಮತ್ತು ಸರವನ್ನು ಯಶಸ್ವಿಯಾಗಿ ಹೊರತೆಗೆದಿದೆ.
ಬಾಲಕ ಈಗ ಚೇತರಿಸಿಕೊಳ್ಳುತ್ತಿದ್ದು, ಆತನ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಈ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಅತ್ಯುತ್ತಮ ದರ್ಜೆಯ ಹಾಗೂ ಗುಣಮಟ್ಟದ ವೈದ್ಯಕೀಯ ಸಾಧನಗಳು ಇರುವುದು ಹಾಗೂ ಶ್ರೇಷ್ಠ ತಜ್ಞ ವೈದ್ಯರ ತಂಡದಿಂದ ಇಂತಹ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಲು ಸಾಧ್ಯವಾಗಿದೆ. ಸಾರ್ವಜನಿಕರಿಗೆ ಸದಾ ಉತ್ತಮ ಸೇವೆ ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ.
