ಅಮೆರಿಕದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಅಪರಿಚಿತ ವ್ಯಕ್ತಿ ಮಾರಣಾಂತಿಕ ಗುಂಡಿನ ದಾಳಿ ನಡೆಸಿದ್ದಾನೆ. ಅಮೆರಿಕದ ಮಾಧ್ಯಮ ವರದಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅವರು ಮಾತನಾಡುತ್ತಿದ್ದಾಗ ಏಕಾಏಕಿ ದುಷ್ಕರ್ಮಿಗಳು ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಒಂದರ ಹಿಂದೆ ಒಂದರಂತೆ ಹಲವು ಸುತ್ತು ಗುಂಡು ಹಾರಿಸಿದ್ದು, ರಹಸ್ಯ ಸೇವಾ ತಂಡ ಕೂಡಲೇ ಅವರನ್ನು ಸ್ಥಳದಿಂದ ಹೊರಗೆ ಕರೆದೊಯ್ದರು.
ಶೀಘ್ರವಾಗಿ ಚೇತರಿಸಿಕೊಳ್ಳಲು ಜೋ ಬಿಡೆನ್ ಪ್ರಾರ್ಥನೆ: ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕಾ ಅಧ್ಯಕ್ಷ ಜೋ ಬಿಡೆನ್, ‘ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್ ಟ್ರಂಪ್ ಅವರ ರ್ಯಾಲಿಯಲ್ಲಿ ನಾನು ಗುಂಡಿನ ದಾಳಿಯ ಬಗ್ಗೆ ತಿಳಿದುಕೊಂಡಿದ್ದೇನೆ. ಅವರು ಸುರಕ್ಷಿತವಾಗಿದ್ದಾರೆ ಎಂದು ಕೇಳಲು ನಾನು ಕೃತಜ್ಞನಾಗಿದ್ದೇನೆ. ನಾನು ಅವರೊಂದಿಗೆ ಮತ್ತು ಅವರ ಕುಟುಂಬ ಮತ್ತು ರ್ಯಾಲಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರ ಜೊತೆಗಿದ್ದೇನೆ’ ಎಂದು ಯುಎಸ್ ಅಧ್ಯಕ್ಷ ಜೋ ಬಿಡನ್ ಹೇಳಿದ್ದಾರೆ.
ಅಮೆರಿಕದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿಯ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಯವರು ಈ ದಾಳಿಯನ್ನು ತೀರ್ವವಾಗಿ ಖಂಡಿಸಿದ್ದಾರೆ.




