
ದಾವಣಗೆರೆ ಏ. 11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಪಕ್ಕ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಸಮುದಾಯ ಭವನ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
Join Whatsapp Group NammaDavangere 04
Join Whatsapp Group NammaDavangere 05
ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಉದ್ಘಾಟಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ. ಇಟ್ನಾಳ್. ಜಿಲ್ಲಾ ಪೆÇಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.
