ನಮ್ಮ ದಾವಣಗೆರೆ ಜು. 01: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ತಿಂಗಳ ಎರಡನೆಯ ವಾರದಿಂದ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ ಉಚಿತ ಫಾಸ್ಟ್ ಫುಡ್ ತಯಾರಿಕೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ ಇನ್ನಿತರೆ ಚಾಟ್ಸ್ ಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು.
Join Whatsapp Group NammaDavangere 04
Join Whatsapp Group NammaDavangere 05
ಆಸಕ್ತರು ಜುಲೈ 2 ರೊಳಗಾಗಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ದೂ.ಸಂ 9505894247, 8970476050, 9591514754, 9686248369, 8970446644 ಗಳಿಗೆ ಸಂಪರ್ಕಿಸಲು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.



