
ಮಹಿಳೆಯರಿಗೆ ಉಚಿತ ಬಸ್ ಯೋಜನೆಯಾದ ಶಕ್ತಿ ಯೋಜನೆಯಿಂದ ಇಲಾಖೆಗೆ ನಷ್ಟವಾಗುತ್ತಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಪ್ರಯಾಣ ದರದಲ್ಲಿ 15-20% ಹೆಚ್ಚಳಕ್ಕೆ ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಈ ಕ್ರಮಕ್ಕೆ ಒಪ್ಪಿಗೆ ನೀಡಬೇಕಿದೆ.
ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌ಆರ್ ಶ್ರೀನಿವಾಸ್ ಮಾತನಾಡಿ, ಟಿಕೆಟ್ ದರ ಏರಿಕೆ ಅನಿವಾರ್ಯ. ಎರಡು ದಿನಗಳ ಹಿಂದೆ ಸಭೆ ನಡೆಸಿ, ಬಸ್ ಪ್ರಯಾಣ ದರದಲ್ಲಿ ಶೇ.15-20ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ಧರಿಸಿದ್ದೇವೆ. ಶಕ್ತಿ ಯೋಜನೆ ಜಾರಿಗೊಳಿಸಿ ಭಾರೀ ನಷ್ಟ ಅನುಭವಿಸುತ್ತಿರುವ ಕೆಎಸ್‌ಆರ್‌ಟಿಸಿ ಉಳಿವಿಗಾಗಿ ಈ ಏರಿಕೆ ಅಗತ್ಯವಿದೆ.
ಕಳೆದ ಮೂರು ತಿಂಗಳಲ್ಲಿ ಕೆಎಸ್‌ಆರ್‌ಟಿಸಿ ₹295 ಕೋಟಿ ನಷ್ಟ ಅನುಭವಿಸಿದೆ ಎಂದು ಅವರು ತಿಳಿಸಿದರು. “ಇಂಧನ ಮತ್ತು ಇತರ ಆಟೋಮೊಬೈಲ್ ಬಿಡಿಭಾಗಗಳ ಬೆಲೆಗಳು ಗಣನೀಯವಾಗಿ ಏರಿಕೆ ಯಾಗಿವೆ. ಕೆಎಸ್‌ಆರ್‌ಟಿಸಿ ನೌಕರರ ವೇತನವನ್ನು 2020 ರಿಂದ ಪರಿಷ್ಕರಿಸಲಾಗಿಲ್ಲ. ಕಳೆದ ಮೂರು ತಿಂಗಳಲ್ಲಿ ನಿಗಮವು ₹ 295 ಕೋಟಿ ನಷ್ಟವನ್ನು ಎದುರಿಸಿದೆ ಎಂದು ಶ್ರೀನಿವಾಸ್ ಹೇಳಿದ್ದಾರೆ.