ಕೆರೆ ಮಣ್ಣು ರೈತರ ಜಮೀನಿಗೆ, ಎರಡು ದಿನಗಳಲ್ಲಿ ಜಾಗ ಗುರುತಿ

ಕೆರೆಯಲ್ಲಿನ ಮಣ್ಣನ್ನು ರೈತರ ಜಮೀನುಗಳಿಗೆ ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಿ, ಮಣ್ಣು ತೆಗೆಯಲು ಸ್ಥಳವನ್ನು ಗುರುತು ಮಾಡಿಕೊಡುವ ಜವಾಬ್ದಾರಿ ಆಯಾ ಇಲಾಖೆ ಅಧಿಕಾರಿಗಳದ್ದಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅವರು ಸೋಮವಾರ (ಏ.7) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆರೆ ಒತ್ತುವರಿ ತೆರವು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೇಸಿಗೆ ಕಾಲದಲ್ಲಿ ಕೆರೆಯ ಮಣ್ಣನ್ನು ರೈತರ ಜಮೀನುಗಳಿಗೆ ನೀಡುವುದರಿಂದ ಹೂಳೆತ್ತಿದಂತಾಗುತ್ತದೆ. ಮತ್ತು ಮಳೆಗಾಲದಲ್ಲಿ ಕೆರೆಯಲ್ಲಿ ನೀರಿನ ಸಂಗ್ರಹ ಹೆಚ್ಚು ಮಾಡಲು ಅವಕಾಶ ಇದ್ದು ರೈತರ ತೋಟ, ಜಮೀನುಗಳಿಗೆ ಹೊಸ ಮಣ್ಣು ಹಾಕವುದರಿಂದ ಬೆಳೆಯು ಉತ್ತಮವಾಗಿ ಬಂದು ರೈತರಿಗೂ ಅನುಕೂಲ, ಅಂತರ್ಜಲ ಮಟ್ಟವೂ ಹೆಚ್ಚಳವಾಗಲಿರುವುದರಿಂದ ಸ್ವಯಂ ಪ್ರೇರಿತವಾಗಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿ ಸಣ್ಣ ನೀರಾವರಿ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆ, ಜಿಲ್ಲಾ ಪಂಚಾಯತ್ ಕೆರೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಜಾಗ ಗುರುತಿಸಿ ರೈತರಿಗೆ ಹೂಳೆತ್ತಲು ಅವಕಾಶ ಮಾಡುವ ಕೆಲಸ ಮಾಡಬೇಕೆಂದು ತಿಳಿಸಿದರು.

ಕೆರೆ ಒತ್ತುವರಿ ತೆರವಿಗೆ ಕ್ರಮ; ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳ ವ್ಯಾಪ್ತಿಯಲ್ಲಿ 538 ಕೆರೆಗಳಿದ್ದು ಇದರಲ್ಲಿ ಸಣ್ಣ ನೀರಾವರಿ ಇಲಾಖೆಯ 72 ಕೆರೆಗಳಿವೆ. ಮತ್ತು ಶಾಂತಿಸಾಗರ ಮತ್ತು ಇತರೆ ನೀರಿನ ಸಂಗ್ರಹವಾಗುವ 22 ಕೆರೆಗಳು ಜಲಸಂಪನ್ಮೂಲ ಇಲಾಖೆಗೆ ಬರಲಿದ್ದು ಉಳಿದಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಹಾಗೂ ಗ್ರಾಮ ಪಂಚಾಯಿತಿ, ಅರಣ್ಯ ಇಲಾಖೆ ವ್ಯಾಪ್ತಿಯ ಕೆರೆಗಳಾಗಿವೆ. ಈ ಕೆರೆಗಳ ಒತ್ತುವರಿಯನ್ನು ತೆರವು ಮಾಡಲೇಬೇಕು.

ಶಾಂತಿಸಾಗರ ಕೆರೆಯು 5447.10 ಎಕರೆಯಷ್ಟಿದ್ದು ಇದರಲ್ಲಿ 280 ಎಕರೆಯಷ್ಟು ಒತ್ತುವರಿಯಾಗಿದೆ. ಈ ಕೆರೆ 45 ಕಿ.ಮೀ ಸುತ್ತಳತೆಯನ್ನು ಹೊಂದಿರುತ್ತದೆ. ಈ ಕೆರೆಯ ಒತ್ತುವರಿಯನ್ನು ತೆರವು ಮಾಡಲು ತಹಶೀಲ್ದಾರರು ಹಾಗೂ ಜಲಸಂಪ್ಮೂಲ ಇಲಾಖೆಯವರು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 72 ಕೆರೆಗಳಿಂದ 10807.27 ಎಕರೆ ವಿಸ್ತೀರ್ಣವಿದೆ. 39 ಕೆರೆಗಳ ಅಳತೆ ಮಾಡಿದ್ದು 33 ಕೆರೆಗಳು ಬಾಕಿ ಇವೆ. ಇದರಲ್ಲಿ 21 ಕೆರೆಗಳಿಂದ 262 ಎಕರೆ ಒತ್ತುವರಿಯಾಗಿದೆ ಎಂದು ಗುರುತಿಸಿ 20 ಕೆರೆಗಳ 254 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಒತ್ತುವರಿ ತೆರವಿಗೆ 1 ಕೆರೆ ಬಾಕಿ ಇದೆ. ಜಗಳೂರು ಕೆರೆ ಒತ್ತುವರಿಯನ್ನು ತೆರವು ಮಾಡುವ ಪ್ರಕರಣ ಹೈಕೋರ್ಟ್‍ನಲ್ಲಿದ್ದು ಪುನರ್ ಪರಿಶೀಲಿಸಲು ಆದೇಶವಾಗಿರುವುದರಿಂದ ಮತ್ತೆ ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ತಹಶೀಲ್ದಾರ್‍ಗೆ ಸೂಚನೆ ನೀಡಿದರು.

ಸಭೆಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರಣ್ಣನವರ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಅಭಿಷೇಕ್, ರೈತ ಮುಖಂಡರಾದ ಬಲ್ಲೂರು ರವಿಕುಮಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

ದಾವಣಗೆರೆ ಏ. 11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಪಕ್ಕ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಸಮುದಾಯ ಭವನ…

ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ದಾವಣಗೆರೆ ಏ.11: ಸಿಇಟಿ-2025 ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ…

Leave a Reply

Your email address will not be published. Required fields are marked *

You Missed

ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

  • By admin
  • April 12, 2025
  • 14 views
ಭಾನುವಾರದ ರಾಶಿ ಭವಿಷ್ಯ 13 ಏಪ್ರಿಲ್ 2025

ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

  • By admin
  • April 12, 2025
  • 82 views
ಯಾವೆಲ್ಲಾ ಜಾತಿಗಳ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು..?

ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

  • By admin
  • April 12, 2025
  • 55 views
ಡಾ. ಬಿ.ಆರ್. ಅಂಬೇಡ್ಕರ್ ರವರ ಸಮುದಾಯ ಭವನದ ಶಂಕುಸ್ಥಾಪನೆ.

ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

  • By admin
  • April 12, 2025
  • 134 views
ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ; ಶೂಗಳು, ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಏ.15 ರಂದು ಕಬಡ್ಡಿ ಮತ್ತು ಕುಸ್ತಿ ಕ್ರೀಡೆ : ವಿಶೇಷ ಅಯ್ಕೆ ಶಿಬಿರ.

  • By admin
  • April 12, 2025
  • 108 views
ಏ.15 ರಂದು ಕಬಡ್ಡಿ ಮತ್ತು ಕುಸ್ತಿ ಕ್ರೀಡೆ : ವಿಶೇಷ ಅಯ್ಕೆ ಶಿಬಿರ.

ಶನಿವಾರದ ರಾಶಿ ಭವಿಷ್ಯ 12 ಏಪ್ರಿಲ್ 2025

  • By admin
  • April 11, 2025
  • 19 views
ಶನಿವಾರದ ರಾಶಿ ಭವಿಷ್ಯ 12 ಏಪ್ರಿಲ್ 2025

ಕೆರೆ ಮಣ್ಣು ರೈತರ ಜಮೀನಿಗೆ, ಎರಡು ದಿನಗಳಲ್ಲಿ ಜಾಗ ಗುರುತಿ

  • By admin
  • April 10, 2025
  • 90 views
ಕೆರೆ ಮಣ್ಣು ರೈತರ ಜಮೀನಿಗೆ, ಎರಡು ದಿನಗಳಲ್ಲಿ ಜಾಗ ಗುರುತಿ

ಸೇವಾ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

  • By admin
  • April 10, 2025
  • 67 views
ಸೇವಾ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸ್ಟೆಗನೋಗ್ರಫಿ ಎಂದರೇನು? ಹುಷಾರ್.. ವಾಟ್ಸಾಪ್ ಉಪಯೋಗಿಸುವ ಪ್ರತೀಯೊಬ್ಬರು ತಿಳಿದುಕೊಳ್ಳಲೇಬೇಕು ..!

  • By admin
  • April 10, 2025
  • 275 views
ಸ್ಟೆಗನೋಗ್ರಫಿ ಎಂದರೇನು? ಹುಷಾರ್.. ವಾಟ್ಸಾಪ್ ಉಪಯೋಗಿಸುವ ಪ್ರತೀಯೊಬ್ಬರು ತಿಳಿದುಕೊಳ್ಳಲೇಬೇಕು ..!

ಗುರುವಾರದ ರಾಶಿ ಭವಿಷ್ಯ 10 ಏಪ್ರಿಲ್ 2025

  • By admin
  • April 9, 2025
  • 38 views
ಗುರುವಾರದ ರಾಶಿ ಭವಿಷ್ಯ 10 ಏಪ್ರಿಲ್ 2025