ಹೊನ್ನಾಳಿ (ದಾವಣಗೆರೆ) : ಮುಂಬರುವ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಶಾಂತಿ–ಸೌಹಾರ್ದಯುತವಾಗಿ ಆಚರಿಸುವ ನಿಟ್ಟಿನಲ್ಲಿ ಹಾಗೂ ಪಟ್ಟಣದಲ್ಲಿ ಕಾನೂನು–ಸುವ್ಯವಸ್ಥೆ ಕಾಪಾಡಲು ಇಂದು ಹೊನ್ನಾಳಿ ಪಟ್ಟಣದಲ್ಲಿ ಪೊಲೀಸ್ ಪಥಸಂಚಲನ ನಡೆಯಿತು.
ಈ ಪಥಸಂಚಲನವನ್ನು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಶ್ರೀಮತಿ ಉಮಾ ಪ್ರಶಾಂತ್ (IPS) ಅವರ ನೇತೃತ್ವದಲ್ಲಿ ನಡೆಸಲಾಯಿತು. ಪಟ್ಟಣದ ಪ್ರಮುಖ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆದಿದ್ದು, ಜನರಲ್ಲಿ ಸುರಕ್ಷತೆ ಮತ್ತು ವಿಶ್ವಾಸ ಮೂಡಿಸುವ ಉದ್ದೇಶ ಹೊಂದಿತ್ತು.
Join Whatsapp Group NammaDavangere 04
Join Whatsapp Group NammaDavangere 05
ಈ ಸಂದರ್ಭದಲ್ಲಿ ಎಸ್‌ಪಿ ಉಮಾ ಪ್ರಶಾಂತ್ ಅವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಅಹವಾಲುಗಳನ್ನು ಆಲಿಸಿದರು ಹಾಗೂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ತುರ್ತು ಪರಿಸ್ಥಿತಿಯಲ್ಲಿ ತಕ್ಷಣವೇ 112 ಸಹಾಯವಾಣಿಗೆ ಕರೆಮಾಡಿ ಸಹಾಯ ಪಡೆಯಲು ಜನತೆಗೆ ಮನವಿ ಮಾಡಿದರು.
ಅಲ್ಲದೆ ಇತ್ತೀಚೆಗೆ ಪ್ರಾರಂಭವಾದ “ಮನೆ ಮನೆಗೆ ಪೊಲೀಸ್” ಕಾರ್ಯಕ್ರಮ ಹಾಗೂ ಪೊಲೀಸ್ ಬೀಟ್ ವ್ಯವಸ್ಥೆ ಕುರಿತು ಜನರಿಗೆ ವಿವರಿಸಿದರು.
ಪಥಸಂಚಲನದಲ್ಲಿ ಚನ್ನಗಿರಿ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಶ್ರೀ ಸ್ಯಾಮ್ ವರ್ಗೀಸ್ (IPS), ಹೊನ್ನಾಳಿ ಪೊಲೀಸ್ ಠಾಣೆಯ ನಿರೀಕ್ಷಕ ಶ್ರೀ ಸುನೀಲ್ ಕುಮಾರ, ಠಾಣೆಯ ಸಿಬ್ಬಂದಿ, QRT ತಂಡ ಹಾಗೂ DAR ಸಿಬ್ಬಂದಿಗಳು ಭಾಗವಹಿಸಿದ್ದರು.



