ಅಪಾಯ ಮಟ್ಟ ತಲುಪಿದ ನದಿ ಪ್ರವಾಹ: ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪನೆ

ನಮ್ಮ ದಾವಣಗೆರೆ ಜು.31: ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿದೆ ಮತ್ತು ತುಂಗಾ ನದಿಯಿಂದಲೂ ಎಲ್ಲಾ ಕ್ರೆಸ್ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹೊರಬಿಡಲಾಗುತ್ತಿದ್ದು ತುಂಗಭದ್ರಾ ನದಿಯಲ್ಲಿ 1,44,468 ಕ್ಯೂಸೆಕ್ಸ್ಗೆ ಏರಿಕೆಯಾಗಿದ್ದು ಇದು ಅಪಾಯ ಮಟ್ಟವನ್ನು ತಲುಪಿರುವುದರಿಂದ ನದಿಪಾತ್ರದಲ್ಲಿನ ಜನರು ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗ0ಗಾಧರಸ್ವಾಮಿ ಜನರಿಗೆ ಮನವಿ ಮಾಡಿದ್ದಾರೆ.

ಅವರು ಬುಧವಾರ ಹೊನ್ನಾಳಿಯ ಸಾಸ್ವೇಹಳ್ಳಿ, ಬಾಲರಾಜ್‌ಘಾಟ್, ಬಂಬೂ ಬಜಾರ್ ಪ್ರದೇಶಗಳಿಗೆ ಶಾಸಕರಾದ ಡಿ.ಜಿ.ಶಾಂತನಗೌಡ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರವಾಹದಿಂದ ತೊಂದರೆಯುಂಟಾಗುವ ಪ್ರದೇಶಗಳ ವೀಕ್ಷಣೆ ಮಾಡಿದರು.
ತುಂಗಾ ನದಿಯಿಂದ 82053 ಮತ್ತು ಭದ್ರಾದಿಂದ 62415 ಕ್ಯೂಸೆಕ್ಸ್ ನೀರು ಬರುತ್ತಿದ್ದು ತುಂಗಭದ್ರಾ ನದಿಯಲ್ಲಿ ಒಂದೂವರೆ ಲಕ್ಷ ಕ್ಯೂಸೆಕ್ಸ್ವರೆಗೆ ನದಿಯಲ್ಲಿ ನೀರು ಹರಿಯುತ್ತಿದೆ. ಇದರಿಂದ ಹೊನ್ನಾಳಿ ಬಾಲರಾಜ್‌ಘಾಟ್, ಬಂಬೂ ಬಜಾರ್ ಪ್ರದೇಶದ ನದಿಪಾತ್ರದಲ್ಲಿನ ಮನೆಗಳಿಗೆ ನೀರು ಬರಲಿದೆ. ಇದಕ್ಕಾಗಿ ಅಂಬೇಡ್ಕರ್ ಭವನ ಇಲ್ಲಿ 20 ಕುಟುಂಬಗಳ 93 ಜನರು, ಗುರುಭವನದಲ್ಲಿ 6 ಕುಟುಂಬದ 27 ಜನರಿಗೆ ಕಾಳಜಿ ಕೇಂದ್ರ ತೆರೆದು ಪ್ರವಾಹಪೀಡಿತ ಪ್ರದೇಶದಿಂದ ಇಲ್ಲಿಗೆ ಸ್ಥಳಾಂತರಿಸಲಾಗಿದೆ. ಮತ್ತು ಹರಿಹರದಲ್ಲಿನ ಗಂಗಾನಗರದಲ್ಲಿನ ಪ್ರವಾಹ ಉಂಟಾಗಬಹುದೆAದು ಎಪಿಎಂಸಿಯಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ನದಿಗೆ ಇಳಿಯದಂತೆ ಎಚ್ಚರಿಕೆ, ನಿಷೇಧ, ಸನ್ನದ್ದವಾದ ಎಸ್‌ಡಿಆರ್‌ಎಫ್, ಅಗ್ನಿಶಾಮಕ ಪಡೆ; ತುಂಗಭದ್ರಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಎಸ್.ಡಿ.ಆರ್.ಎಫ್ ಪಡೆ ಮತ್ತು ಅಗ್ನಿ ಶಾಮಕ ಇಲಾಖೆ ತಂಡವು ರಕ್ಷಣಾ ಪರಿಕರಗಳೊಂದಿಗೆ ಸನ್ನದ್ದವಾಗಿಡಲಾಗಿದೆ. ಮತ್ತು ನದಿಪಾತ್ರದಲ್ಲಿ ಜನ, ಜಾನುವಾರುಗಳು ನದಿಗೆ ಇಳಿಯದಂತೆ ಅಪಾಯಕಾರಿ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತ್ತು ಗ್ರಾಮ ಮಟ್ಟದಲ್ಲಿನ ಟಾಸ್ಕ್ ಪೋರ್ಸ್ ಸಮಿತಿ ರಚನೆ ಮಾಡಿ ನದಿಪಾತ್ರದಲ್ಲಿನ ಎಲ್ಲಾ ಗ್ರಾಮಗಳಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಗ್ರಾಮಾಡಳಿತ ಅಧಿಕಾರಿಗಳು ಸೇರಿದಂತೆ ತಹಶೀಲ್ದಾರರು ಕಟ್ಟೆಚ್ಚರ ವಹಿಸಲು ಸೂಚನೆ ನೀಡಿ ನದಿಗೆ ಇಳಿಯದಂತೆ ಡಂಗೂರ ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

ಪಥ ಬದಲಿಸಲು ಸೂಚನೆ; ನದಿ ಪ್ರವಾಹದಿಂದ ಕೆಲವು ರಸ್ತೆ ಸಂಪರ್ಕಗಳು ಕಡಿತವಾಗಿದ್ದು ಇಲ್ಲಿ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಷೇಧಿತ ಮಾರ್ಗದ ಬದಲಾಗಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ. ಹೊನ್ನಾಳಿ ತಾಲ್ಲೂಕಿನ ವಿಜಯಪುರ-ಕೋಟೆಮಲ್ಲೂರು ರಸ್ತೆ ಬದಲಾಗಿ ಹಾರಕೆರೆ ರಸ್ತೆ, ಕಮ್ಮಾರಗಟ್ಟೆ-ಬೆನಕನಹಳ್ಳಿ ಬದಲಾಗಿ ಕೈಮರ ಕ್ಯಾಂಪ್ ರಸ್ತೆ, ಹರಿಹರ ತಾ; ನಂದಿಗುಡಿ-ಪತ್ಯಾಪುರ-ಉಕ್ಕಡಗಾತ್ರಿ ರಸ್ತೆ ಸೇತುವೆ ಮುಳುಗಡೆಯಾಗಿದ್ದು ಇದರ ಬದಲಾಗಿ ನಂದಿಗುಡಿ-ತುAಮ್ಮಿನಕಟ್ಟೆ ರಸ್ತೆ ಬಳಕೆಗೆ ಸೂಚಿಸಲಾಗಿದೆ.

ಹೊನ್ನಾಳಿ ಬೇಸ್ ಸ್ಟೇಷನ್; ಹೊನ್ನಾಳಿಯಲ್ಲಿ ತುಂಗಭದ್ರಾ ನದಿಯ ನೀರಿನ ಮಟ್ಟ ಅಳತೆಗೆ ಕೇಂದ್ರ ವಾಟರ್ ಬೋರ್ಡ್ನ ಬೇಸ್ ಸ್ಟೇಷನ್ ಇದ್ದು ಇಲ್ಲಿ ಜುಲೈ 31 ರ ಸಂಜೆ 6 ಗಂಟೆ ವೇಳೆಗೆ 12.06 ಮೀಟರ್ ಪ್ರಮಾಣದಲ್ಲಿ ನೀರು ಹರಿಯುತ್ತಿದೆ, ಇದು ಅಪಾಯ ಮಟ್ಟವಾಗಿದೆ. ಈ ಸ್ಟೇಷನ್‌ನಲ್ಲಿ 10.85 ಮೀಟರ್ ಹರಿವು ದಾಖಲಾದರೆ ಅಪಾಯದ ಮಟ್ಟ ಎಂದೇ ಪರಿಗಣಿಸಲಾಗುತ್ತದೆ. 12.57 ಮೀಟರ್ ದಾಖಲಾದರೆ ಪ್ರವಾಗ ಉಂಟಾಗಿ ಹಾನಿಯ ಮಟ್ಟವೆಂದು ಪರಿಗಣಿಸಲಾಗುತ್ತದೆ. ಪ್ರತಿ ಗಂಟೆಗೆ ಇಲ್ಲಿನ ದಾಖಲೆಯಲ್ಲಿ ಪಡೆದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ.

ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪನೆ; ಜಿಲ್ಲಾಧಿಕಾರಿಗಳ ಕಚೇರಿ 08192-234034, 1077, ಎಸ್‌ಡಿಆರ್‌ಎಫ್ ಘಟಕ, ದೇವರಬೆಳೆಕೆರೆ 7411308591, ದಾವಣಗೆರೆ ಅಗ್ನಿಶಾಮಕ ಇಲಾಖೆ 08192-258101, 112, ದಾವಣಗೆರೆ ಮಹಾನಗರ ಪಾಲಿಕೆ 08192-234444, 8277234444, ದಾವಣಗೆರೆ ತಾ; ಕಚೇರಿ 9036396101, ಹರಿಹರ 08192-272959, ಜಗಳೂರು 08196-227242, ಹೊನ್ನಾಳಿ 08188-252108, ನ್ಯಾಮತಿ 8073951245, ಚನ್ನಗಿರಿ 7892481962 ದೂರವಾಣಿ, ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.

Related Posts

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ನಮ್ಮ ದಾವಣಗೆರೆ ಸೆ.(04): ಹೈಯರ್ ಇಂಡಿಯಾ ಬಗ್ಗೆ:2003ರಲ್ಲಿ ಭಾರತದಲ್ಲಿ ಸ್ಥಾಪನೆಯಾದ ಹೈಯರ್ ಅಪ್ಲೈಯನ್ಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಹೈಯರ್ ಇಂಡಿಯಾ), ಹೈಯರ್ ಸಿಂಗಾಪುರ್ ಇನ್ವೆಸ್ಟ್‌ಮೆಂಟ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದ್ದು, ಇದು ಉತ್ತಮ ಜೀವನಕ್ಕಾಗಿ ಪರಿಹಾರಗಳನ್ನು ಒದಗಿಸುವ ವಿಶ್ವದ ಪ್ರಮುಖ ಸಂಸ್ಥೆಯಾಗಿದೆ.ಸದ್ಯ,…

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×