ಕೊಂಡಜ್ಜಿ ಕೆರೆಯನ್ನು ಪ್ರವಾಸಿ ತಾಣವಾಗಿಸಲು ಕ್ರಮ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ನಮ್ಮ ದಾವಣಗೆರೆ ಏ.06: ಜಿಲ್ಲೆಯಲ್ಲಿನ ಆರು ತಾಲ್ಲೂಕಿನಲ್ಲಿನ ಪ್ರಮುಖ ಸ್ಥಳಗಳನ್ನು ಗುರುತಿಸಿ, ಅವುಗಳನ್ನು ಪ್ರವಾಸಿ ತಾಣಗಳಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಅವರು ಶನಿವಾರ ಕೊಂಡಜ್ಜಿ ಕೆರೆಯಲ್ಲಿ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆ ಹಾಗೂ ಬಾಲಕಿಯರಿಗೆ ಏರ್ಪಡಿಸಲಾದ ಜಲಸಾಹಸ ಕ್ರೀಡೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದರು.

Join Whatsapp Group NammaDavangere 04
Join Whatsapp Group NammaDavangere 05

ಮಹಿಳಾ ದಿನಾಚರಣೆಯ ಪ್ರಯುಕ್ತ ಕೆರೆಯಲ್ಲಿ ಮಹಿಳೆಯರಿಗಾಗಿ ಏಪ್ರಿಲ್ 7 ರವರೆಗೆ ಉಚಿತವಾಗಿ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜಿಲ್ಲೆಯು ಕ್ರೀಡೆಗೆ ಪ್ರಸಿದ್ದಿ. ಹಾಗಾಗಿ ಮಹಿಳೆಯರನ್ನು ಕ್ರೀಡಾ ವಿಭಾಗದಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ದೃಷ್ಟಿಯಿಂದ ಇದನ್ನು ಪ್ರವಾಸಿ ತಾಣವಾಗಿಸಿ, ವಿವಿಧ ರೀತಿಯ ಜಲ ಸಾಹಸ ಕ್ರೀಡೆಗಳ ತರಬೇತಿ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಅಷ್ಟೇ ಅಲ್ಲದೇ ಮಹಿಳಾ ದಿನಾಚರಣೆಯ ಪ್ರಯುಕ್ತ ಸ್ಪರ್ಧೆಗಳನ್ನು ಆಯೋಜಿಸಿ, ಸ್ಪರ್ಧೆಯಲ್ಲಿ ಜಯಗಳಿಸಿದ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಗೆ ಪ್ರಶಸ್ತಿ ಪತ್ರ ನೀಡಲಾಗುವುದು. ಜಿಲ್ಲೆಯ ಚನ್ನಗಿರಿ, ಹರಿಹರ ಮುಂತಾದ ಕ್ಷೇತ್ರಗಳಲ್ಲಿನ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರವಾಸಿ ತಾಣಗಳನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಜಲ ಸಹಾಸ ಕ್ರೀಡೆಯಲ್ಲಿ ಭಾಗವಹಿಸದ ಸಂತೋಷದ ಕ್ಷಣ ಹಾಗೂ ಅನುಭವಗಳ ಕುರಿತು ಮಾಹಿತಿ ಪಡೆದರು. ನಾನು ಹುಟ್ಟಿದ ಗ್ರಾಮ ಕಕ್ಕರಗೊಳ್ಳವಾಗಿದ್ದು ತಾಲ್ಲೂಕು ಮಟ್ಟದ ಸ್ಕೌಟ್ಸ್ ಅಂಡ್ ಗೈಡ್ ಕಾರ್ಯಕ್ರಮದಲ್ಲಿ ಕೊಂಡಜ್ಜಿಯಲ್ಲಿ ಭಾಗವಹಿಸಲಾಗಿತ್ತು. ಕೊಂಡಜ್ಜಿ ಕರೆಯಲ್ಲಿ ಜಲಸಾಹಸ ಕ್ರೀಡೆಗಳ ತರಬೇತಿಯನ್ನು ನೀಡಲು ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈ ವೇಳೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾ, ತರಬೇತುದಾರ ಶಬ್ಬೀರ್ ಹಾಗೂ ವಿದ್ಯಾಥಿಗಳು ಭಾಗವಹಿಸಿದ್ದರು.

Related Posts

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ನಮ್ಮ ದಾವಣಗೆರೆ ಸೆ.(04): ಹೈಯರ್ ಇಂಡಿಯಾ ಬಗ್ಗೆ:2003ರಲ್ಲಿ ಭಾರತದಲ್ಲಿ ಸ್ಥಾಪನೆಯಾದ ಹೈಯರ್ ಅಪ್ಲೈಯನ್ಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಹೈಯರ್ ಇಂಡಿಯಾ), ಹೈಯರ್ ಸಿಂಗಾಪುರ್ ಇನ್ವೆಸ್ಟ್‌ಮೆಂಟ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದ್ದು, ಇದು ಉತ್ತಮ ಜೀವನಕ್ಕಾಗಿ ಪರಿಹಾರಗಳನ್ನು ಒದಗಿಸುವ ವಿಶ್ವದ ಪ್ರಮುಖ ಸಂಸ್ಥೆಯಾಗಿದೆ.ಸದ್ಯ,…

ಗುರುಕುಲ ವಸತಿಯುತ ಶಾಲೆಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯವೇ ಭಾಗ್ಯ ಸಂದೇಶ

ನಮ್ಮ ದಾವಣಗೆರೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಗುರುಕುಲ ವಸತಿಯುತ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕ ಯೋಗಾಭ್ಯಾಸ ಪ್ರಮುಖ…

Leave a Reply

Your email address will not be published. Required fields are marked *

You Missed

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಗ್ರಾಹಕರಿಗೆ ಅತ್ಯಾಧುನಿಕ ಹೈಯರ್ ಇಂಡಿಯಾ ಗೃಹೋಪಯೋಗಿ ಉಪಕರಣಗಳು ಲಭ್ಯ.

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಶುಕ್ರವಾರದ ರಾಶಿ ಭವಿಷ್ಯ 04 ಸೆಪ್ಟೆಂಬರ್ 2026

ಗುರುವಾರದ ರಾಶಿ ಭವಿಷ್ಯ 03 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಬುಧವಾರದ ರಾಶಿ ಭವಿಷ್ಯ 02 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಮಂಗಳವಾರದ ರಾಶಿ ಭವಿಷ್ಯ 01 ಸೆಪ್ಟೆಂಬರ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಸೋಮವಾರದ ರಾಶಿ ಭವಿಷ್ಯ 31 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಭಾನುವಾರದ ರಾಶಿ ಭವಿಷ್ಯ 30 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶನಿವಾರದ ರಾಶಿ ಭವಿಷ್ಯ 29 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಶುಕ್ರವಾರದ ರಾಶಿ ಭವಿಷ್ಯ 28 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026

ಗುರುವಾರದ ರಾಶಿ ಭವಿಷ್ಯ 27 ಆಗಸ್ಟ್ 2026
×