
ನಮ್ಮ ದಾವಣಗೆರೆ ನ. 20: ದಾವಣಗೆರೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಗಂಗಾಧರ ಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಹಾಗೂ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು, ಸಿಇಓ ರವರಾದ ಶ್ರೀ ಸುರೇಶ್ ಇಟ್ನಾಳ್ ರವರು ಬ್ಯಾಂಕ್ ಲೀಡ್ ಅಧಿಖಾರಿಗಳವರ ಉಪಸ್ಥಿತಿಯಲ್ಲಿ ಜಿಲ್ಲಾ ಮಟ್ಟದ ಬ್ಯಾಂಕ್ ಭದ್ರತೆ ಸಂಬಂಧ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಬ್ಯಾಂಕ್ ಗಳ ಭದ್ರತೆ ಸಂಬಂಧ ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆ ಸೂಚಿಸಲಾಯಿತು. ಜಿಲ್ಲೆಯ ಎಲ್ಲಾ ಬ್ಯಾಂಕ್ ಗಳ ಅಧಿಕಾರಿಗಳು, ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು
Join Whatsapp Group NammaDavangere 04
Join Whatsapp Group NammaDavangere 05